Bengaluru 21°C
Ad

ಉಡುಪಿ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ

ಉಡುಪಿ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ

ಉಡುಪಿ: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.

ಜಲಪೂರಣ ಶಾಸ್ತ್ರದ ಅಂಗವಾಗಿ ಮಠದ ಪುರೋಹಿತರಾದ ರಾಘವೇಂದ್ರ ಕೊಂಡಂಚ ಇವರು ಕಲಶ ಪೂಜೆಯನ್ನು ಮಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಸುಶೀಂದ್ರತೀರ್ಥ ಶ್ರೀಪಾದರ  ಉಪಸ್ಥಿತಿಯಲ್ಲಿ ಜಲಪೂರಣವನ್ನು ಮಾಡಲಾಯಿತು.

ಮರುದಿನ ಬ್ರಾಹ್ಮೀ ಮುಹೂರ್ತದಲ್ಲಿ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪುತ್ತಿಗೆ ಉಭಯ ಶ್ರೀಪಾದರು ಗಂದೋಪಚಾರದೊಂದಿಗೆ ಎಣ್ಣೆ ಶಾಸ್ತ್ರವನ್ನು ಮಾಡಿದರು. ನೆರೆದಿದ್ದ ಭಕ್ತರಿಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.

Ad
Ad
Nk Channel Final 21 09 2023