ಉಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಿಗೆ 136 ಅಟ್ಟೆ ಮಲ್ಲಿಗೆ ಹೂಗಳನ್ನು ಸಮರ್ಪಿಸಿ ವಿಶೇಷ ಆರತಿ ಬೆಳಗಲಾಯಿತು. ನೂತನ ಮುಖ್ಯಮಂತ್ರಿಯ ಯಶಸ್ವಿ ಆಡಳಿತ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಯುವರಾಜ್, ಮಾಜಿ ಉಪಾಧ್ಯಕ್ಷೆ ಅಮೃತಾ ಕೃಷ್ಣಮೂರ್ತಿ, ಸದಾಶಿವ ಅಮೀನ್ ಕಟ್ಟೆಗುಡ್ಡೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

