ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
Ad
ದೇಗುಲಕ್ಕೆ ಪ್ರವೇಶಿಸುತ್ತಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ದೇಗುಲದ ಆಡಳಿತ ಮಂಡಳಿ, ಅರ್ಚಕರು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು.
Ad
ಬಳಿಕ ಗರುಡಗಂಬಕ್ಕೆ ಕೈಮುಗಿದು ದೇಗುಲ ಪ್ರವೇಶ ಮಾಡಿದ ಡಿಕೆಶಿ ದಂಪತಿ ಕೊಲ್ಲೂರು ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ಮಾಂಕಾಳು ವೈದ್ಯ, ಮಾಜಿ ಶಾಸಕ ಗೋಪಾಲ ಪೂಜಾರಿ, ಉದ್ಯಮಿ ಬಿ.ಬಿ ಶೆಟ್ಟಿ, ರಾಜು ಪೂಜಾರಿ ಸಾಥ್ ನೀಡಿದರು.
Ad
Ad