Bengaluru 21°C
Ad

ಉಡುಪಿ: ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Dr Raja

ಉಡುಪಿ: ಉಡುಪಿಯ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ (73) ರವಿವಾರ ಬೆಳಗ್ಗೆ ನಿಧನ ಹೊಂದಿದರು. ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.

ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಉತ್ತಮ ಜನ ಸ್ನೇಹಿಯಾಗಿ  ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹಿರಿಯ ವೈದ್ಯ ಡಾ.ರಾಜಾ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

Ad
Ad
Nk Channel Final 21 09 2023
Ad