ಉಡುಪಿ: ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಾಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದರು.

ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಜನರಿಂದ ಆಗ್ರಹ ಕೇಳಿಬರುತ್ತಿದ್ದ ಬೆನ್ನಲ್ಲೇ ಜನಸಂದಣಿಯಿರುವ ಪ್ರದೇಶದಲ್ಲೇ ಮರ ಉರುಳಿದ ಘಟನೆ ಸಂಭವಿಸಿದ್ದು ಜನರಿಗೆ ಅಥವಾ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ.

ಸ್ಥಳೀಯರು ಸೇರಿ ಬಿದ್ದ ಮರವನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.