ಉಡುಪಿ: ಎರಡು ಮೂರು ತಿಂಗಳಿಂದ ಡಿಕೆ ಶಿವಕುಮಾರ್ ಹೇಳಿಕೆ ಗಮನಿಸುತ್ತಿದ್ದೇನೆ. ಬಹಳ ಮಾರ್ಮಿಕವಾಗಿ ಮಾತನಾಡುತ್ತಿದ್ದಾರೆ. ಯಾತಕ್ಕಾಗಿ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಅಭಿವೃದ್ಧಿ ಕೆಲಸಗಳು ನಡಿತಾ ಇಲ್ಲ. ಮುಖ್ಯಮಂತ್ರಿ ಕುರ್ಚಿಗೆ ದಿನೇ ದಿನೇ ಪೈಪೋಟಿ ಹೆಚ್ಚಾಗುತ್ತಿದೆ. ಅಭಿವೃದ್ಧಿ ಇಲ್ಲದೆ ರಾಜ್ಯದ ಜನ ಪರದಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಚುನಾಯಿತ ಸರಕಾರ ಇದೆ ಅನ್ನೋದೇ ಮರೆತು ಹೋಗಿದೆ. ಬಡವ ರೈತ ಹಿಂದು ವಿರೋಧಿ ಸರಕಾರ ರಾಜ್ಯದಲ್ಲಿದೆ ಎಂದರು.

ಎಷ್ಟು ಬೇಗ ಈ ಸರಕಾರ ಕಿತ್ತು ಹಾಕಿದರೆ ಜನರಿಗೆ ಅನುಕೂಲ. ನವಂಬರ್ ಕ್ರಾಂತಿಯ ಬಗ್ಗೆ ಆಡಳಿತ ಪಕ್ಷದ ಸಚಿವರು ಶಾಸಕರೇ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಯ ಬಗ್ಗೆ ಯಾವುದೇ ಚರ್ಚೆ ಆಗುತ್ತಿಲ್ಲ. ಕ್ರಾಂತಿಗಳ ಬಗ್ಗೆ ಮಾತನಾಡುತ್ತಾ ಕೂತಿದ್ದಾರೆ. ಆಡಳಿತ ಪಕ್ಷದ ಸಚಿವರ ಹೇಳಿಕೆ ಗಮನಿಸಿದರೆ ಅರ್ಧದಷ್ಟು ಸಚಿವರು ಮುಖ್ಯಮಂತ್ರಿ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ ಎಂದರು.