ಉಡುಪಿ: ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.
ಮಳೆಗಾಲದ ಕುರಿತ ಮಹತ್ವದ ಸಭೆಗೆ ಆಗಮಿಸಿದ ಅಧಿಕಾರಿಗಳು ಮೊಬೈಲ್ ನಲ್ಲಿ ನಿರತರಾಗಿದ್ದರು. ಉಸ್ತುವಾರಿ ಸಚಿವೆ ಮಾಹಿತಿ ನೀಡುತ್ತಿರುವಾಗಲೇ ಮೊಬೈಲ್ ನಲ್ಲಿ ಮಗ್ನರಾಗಿದ್ದರು. ಮಹತ್ವದ ಸಭೆಯಲ್ಲಿ ಯಾವುದೇ ತಲೆಬಿಸಿ ಇಲ್ಲದೆ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು. ಇನ್ನು ಸಚಿವರು ಹೇಳಿದ ಸೂಚನೆಗಳನ್ನು ಎಷ್ಟರಮಟ್ಟಿಗೆ ಪಾಲಿಸುತ್ತಾರೆ ಎಂಬುವುದೇ ಯಕ್ಷಪ್ರಶ್ನೆಯಾಗಿದೆ.

