Bengaluru 22°C
Ad

ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅಗ್ನಿ ಅವಘಡ

Udupi

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಸಿಬ್ಬಂದಿ ಹಾಗೂ ಇಬ್ಬರು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ.‌ ಇದರಿಂದ ಭಾರೀ ದುರಂತ ತಪ್ಪಿದಂತಾಗಿದೆ.

ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಉಡುಪಿ ಅಗ್ನಿಶಾಮಕ ಇಲಾಖೆಯ ತಂಡ ಎರಡು ಫೈರ್ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ

Ad
Ad
Nk Channel Final 21 09 2023