Bengaluru 23°C
Ad

ಉಡುಪಿ: ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್‌ ಉಚ್ಚಾಟನೆ

Udupi: Former MLA Raghupathi Bhat expelled from BJP

ಉಡುಪಿ: ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಆದೇಶಿಸಿದ್ದಾರೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.

ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad