Bengaluru 29°C
Ad

ತನ್ನ ಉಚ್ಚಾಟಿಸಿದರೇನಂತೆ. . .: ಮಾಜಿ ಶಾಸಕ ರಘುಪತಿ ಭಟ್‌ ಪ್ರತಿಕ್ರಿಯೆ

Bhat (1)

ಉಡುಪಿ: ಮಾಜಿ ಶಾಸಕನಾಗಿದ್ದರೂ ಪಕ್ಷದಲ್ಲಿ ಯಾವುದೇ ಹುದ್ದೆ ನೀಡಿರಲಿಲ್ಲ. ಜವಾಬ್ದಾರಿಯಿಂದ ಉಚ್ಚಾಟಿಸಿರಬಹುದು. ಕಾರ್ಯಕರ್ತನಾಗಿಯೇ ಇರುತ್ತೇನೆ. ಪಕ್ಷದಿಂದ ಉಚ್ಚಾಟಿಸಿದವರಿಗೆ ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ. ಚುನಾವಣೆಯಲ್ಲಿ ಗೆದ್ದು ಪಕ್ಷಕ್ಕೆ ಹೋಗುವೆ ಅಥವಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಇರುವೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟಿಸಿದ ಸುದ್ದಿ ಮಾಧ್ಯಮಗಳ ಮೂಲಕ ತಿಳಿಯಿತು. ಪಕ್ಷದ ನೋಟಿಸ್‌ ಕೂಡ ತಲುಪಿರಲಿಲ್ಲ. ಈಗ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಿರಬಹುದು.

ಆದರೆ, ಈವರೆಗೂ ಪಕ್ಷದ ಯಾವ ನಾಯಕರಿಗೂ ನಾನು ಬೈದಿಲ್ಲ. ವ್ಯವಸ್ಥೆ ಸರಿಯಾಗಬೇಕು ಎಂದಷ್ಟೆ ಹೇಳಿದ್ದೇನೆ. ಆದರೆ, ಈ ಹಿಂದೆ ಪಕ್ಷಕ್ಕೆ ಮುಜುಗರ ಆಗುವಂತೆ ಬೈದಿದ್ದ ಜಗದೀಶ್‌ ಶೆಟ್ಟರ್‌ ಅವರು ಒಂದೇ ವರ್ಷದಲ್ಲಿ ಬಿಜೆಪಿ ಸೇರಿದರು ಮತ್ತು ಸಂಸದರಾಗಿ ಸ್ಪರ್ಧಿಸಲು ಟಿಕೆಟ್‌ ಕೂಡ ನೀಡಿದ್ದಾರೆ. ಹೀಗಾಗಿ ನಾನು ಬಿಜೆಪಿಗೆ ಹೋಗುತ್ತೇನೆ. ಉಚ್ಚಾಟಿಸಿರುವುದು ನೋವು ತಂದಿದೆ ಎಂದರು.

Ad
Ad
Nk Channel Final 21 09 2023
Ad