Bengaluru 24°C
Ad

ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರಿಂದ ಕಾರಾಗೃಹದಲ್ಲಿ ದಾಂಧಲೆ : ಪೊಲೀಸರ ಮೇಲೆ ಹಲ್ಲೆ

ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಉಡುಪಿ: ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಹಿರಿಯಡಕ ಕಾಜರಗುತ್ತು ಜಿಲ್ಲಾ ಕಾರಾಗೃಹದಲ್ಲಿ ಜೂ.24ರಂದು ಈ ಘಟನೆ ನಡೆದಿದೆ.ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ.

ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೇನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದನೆಂದು ದೂರಲಾಗಿದೆ. ಈ ವೇಳೆ ಅವರನ್ನು ಸಿಬ್ಬಂದಿ ಸೆರೆಹಿಡಿದರು. ಅಲ್ಲದೆ ಕರ್ತವ್ಯದಲ್ಲಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ದೂರಲಾಗಿದೆ. ಅದರಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರನ್ನು ಇಲ್ಲಿಂದ ಬೇರೆ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡುವಂತೆ ಜೈಲು ಅಧೀಕ್ಷಕರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅದರಂತೆ ನ್ಯಾಯಾಲಯ ಅನುಮತಿ ನೀಡಿದೆ. ಮುಂದೆ ಇಲಾಖೆ ಸೂಚಿಸುವ ಸೆಂಟ್ರಲ್ ಜೈಲಿಗೆ ಇವರನ್ನು ಸ್ಥಳಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad