ಉಡುಪಿ : ಉಡುಪಿ ಜಿಲ್ಲೆಯನ್ನು ಕರ್ನಾಟಕದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಮಾನದಂಡದಂತೆ ಶೇ. 95ಕ್ಕಿಂತ ಹೆಚ್ಚು ಸಾಕ್ಷರತೆ ಹೊಂದಿರುವ ಪ್ರದೇಶವನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂದು ಪರಿಗಣಿಸಲಾಗುತ್ತದೆ.
ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್‌ಗಳು, 7 ತಾಲೂಕು ಪಂಚಾಯತ್‌ಗಳು ಹಾಗೂ 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾಕ್ಷರತಾ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ.

