Bengaluru 22°C
Ad

ಬೆಳ್ಮಣ್ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕಿ‌ ಮೃತ್ಯು

ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ.

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ.

Ad
300x250 2

ಮೃತ ವಿದ್ಯಾರ್ಥಿನಿಯನ್ನು ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ. ಪ್ರಣಮ್ಯ ಅವರು ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯಕ್ಕೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಅವರು‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಣಮ್ಯ ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ‌ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad