ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಗೂಡ್ಸ್ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಹಿರಿಯಡಕದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್, ಘಟನೆ ಸಂಭವಿಸಿದ ಸಂದರ್ಭದಲ್ಲಿ ಕಾರಿನಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ.

