ಉಡುಪಿ: ಉಡುಪಿ ಜಿಲ್ಲೆಯ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆಯು ಮಾರ್ಚ್ 24 ಮತ್ತು 25 ರಂದು ನಡೆಯಲಿದೆ.
ಕಾಪುವಿನ 3 ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ನಡೆಯಲಿದೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ. ಭಕ್ತರಿಗೆ ತಾಯಿಯ ದರ್ಶನ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಯಾವುದೇ ತೊಂದರೆಯಾಗ ರೀತಿಯಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೊಸ ಮಾರುಗುಡಿಯ ಮ್ಯಾನೇಜರ್ ತಿಳಿಸಿದ್ದಾರೆ.

