Ad

ಭಾರಿ ಮಳೆ; ಇಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Rai

ಉಡುಪಿ: ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ ಗೆ ಅವಾಂತರಗಳು ಸೃಷ್ಟಿಯಾಗಿವೆ. ಜೊತೆಗೆ ಉಡುಪಿಯಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಇತ್ತ ಉತ್ತರ ಕನ್ನಡದಲ್ಲೂ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್​​​ ಆಗಿತ್ತು. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಎರಡು ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

Ad
300x250 2

ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲೆಗಳಿಗೆ ಕಳೆದ ದಿನ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ. ಅಗತ್ಯಬಿದ್ದಲ್ಲಿ ಹೊನ್ನಾವರ ತಾಲೂಕಿನ ಶಾಲೆಗಳಿಗೂ ರಜೆ ನೀಡಲು ಸೂಚನೆ ನೀಡಿದ್ದಾರೆ. ಇಂದು ಮಳೆಯಿಂದ ಇನ್ನಷ್ಟು ಅವಾಂತರ ಆಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಇತ್ತ ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ.

 

Ad
Ad
Nk Channel Final 21 09 2023
Ad