ಉಡುಪಿ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ರಘುಪತಿ ಭಟ್ ಅವರಿಗೆ ಹಿಜಾಬ್ ವಿವಾದದ ವಿಧ್ಯಾರ್ಥಿನಿ ಅಲಿಯಾ ಆಸ್ಸಾದಿ ತಿರುಗೇಟು ನೀಡಿದ್ದು, “ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು” ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಉಡುಪಿ ಹಿಜಾಬ್ ವಿವಾದದ ವಿರುದ್ದ ಹೋರಾಟ ನಡೆಸಿದ ವಿಧ್ಯಾರ್ಥಿನಿ ಅಲಿಯಾ ಅಸ್ಸಾದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ? ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ಹೇಳಿದ್ದಾರೆ.
ರಘುಪತಿ ಭಟ್ ಅವರೇ, ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ತಿರುಗೇಟು ನೀಡಿದ್ದಾರೆ.