ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದ್ವೇಷ ಭಾಷಣದ ಪ್ರಕರಣ ದಾಖಲಾಗಿತ್ತು. ಬಿ ಎಲ್ ಸಂತೋಷ್ ವಿರುದ್ಧ ತಿಮರೋಡಿ ಮಾತನಾಡಿದ್ದು ಸಾಕಷ್ಟು ವೈರಲ್ ಆಗಿತ್ತು.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ಬಂಧಿಸಿ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

