ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಭಾರಿ ಅನಾಹುತಗಳು ಸಂಭವಿಸಿದ್ದು, ಓಡಾಡಲು ಕಷ್ಟಕರವಾಗಿದೆ, ಇತ್ತ ಮಕ್ಕಳಿಗೂ ಶಾಲೆಗೆ ಹೋಗುವುದು ಕಷ್ಟವಾದ್ದರಿಂದ,  ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 2 (ಶುಕ್ರವಾರ)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.