Bengaluru 30°C

ಉಡುಪಿ: ಹೆಜ್ಜೇನು ದಾಳಿ; 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಹೆಜ್ಜೇನು ದಾಳಿ ನಡೆಸಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ವಳಕಾಡು ಶಾಲಾ ಆವರಣದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಉಡುಪಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ವಳಕಾಡು ಶಾಲಾ ಆವರಣದಲ್ಲಿ ಮಂಗಳವಾರ ಸಂಜೆ ನಡೆದಿದೆ.


ಗಾಯಗೊಂಡ 41 ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಲ್ಲಿ ಮೂರು ಮಕ್ಕಳನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಓರ್ವ ಪೋಷಕರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಮಕ್ಕಳು ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.


ಶಾಲಾ ಆವರಣದಲ್ಲಿ ಆಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ, ಕಟ್ಟಡದಲ್ಲಿದ್ದ ಜೇನುಗೂಡಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ. ಇದರಿಂದ ಜೇನು ನೋಣಗಳು ಅಲ್ಲಿದ್ದ ಮಕ್ಕಳ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಇದರಿಂದ ಮಕ್ಕಳು ಬೊಬ್ಬೆ ಹಾಕಿ ಓಡಿ ಹೋಗಿದ್ದು, ಕೂಡಲೇ ಶಿಕ್ಷಕರು, ಪೋಷಕರು ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆಂದು ತಿಳಿದುಬಂದಿದೆ.


Nk Channel Final 21 09 2023