ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಾರ್ಕೂರು ನಿವಾಸಿ ಪ್ರವೀಣ್ ಕುಮಾರ್ ಕೆ ಬಂಧಿತ ಆರೋಪಿ. ಬಂಧಿತನಿಂದ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 7,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹೇರಾಡಿ ಗ್ರಾಮದ ನಿವಾಸಿ ಎಂ. ಮಂಜುನಾಥ ರಾವ್‌ ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿ ಬಾರಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳ, ಬೆಡ್‌ರೂಮ್‌ನಲ್ಲಿದ್ದ ಗೋಡ್ರೇಜ್ ಬೀಗ ಒಡೆದು, ಸುಮಾರು 14,67,000 ರೂ. ಮೌಲ್ಯದ ಚಿನ್ನಾಭರಣ ಮತ್ತು 49,000 ರೂ. ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

View this post on Instagram

A post shared by News Karnataka (@newskarnataka)