Bengaluru 30°C

ಶೀಘ್ರದಲ್ಲೇ ಉಡುಪಿ ಜಿಲ್ಲೆಗೆ ಶುಭಸುದ್ದಿ ಕೊಡ್ತೇನೆ: ಸಚಿವ ಸೋಮಣ್ಣ ಭರವಸೆ

Somanna

ಉಡುಪಿ: ಕರಾವಳಿ ಭಾಗ ನಮ್ಮ ಹೃದಯವಿದ್ದಂತೆ. ಇಲ್ಲಿನ ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಿ ಉನ್ನತೀಕರಣಗೊಳಿಸುವುದು ಇಲಾಖೆಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.


ಕಾಪುವಿಗೆ ಭೇಟಿ ನೀಡಿದ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ರೈಲ್ವೇ ರಾಜ್ಯ ಖಾತೆಯ ಸ್ವತಂತ್ರ ಸಚಿವನಾಗಿ ಎರಡು ವಾರಗಳ ಹಿಂದೆ ಮಂಗಳೂರಿಗೆ ಬಂದು ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರುಗಳ ಉಪಸ್ಥಿತಿಯಲ್ಲಿ ರೈಲ್ವೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.
ಇಲ್ಲಿ ಬಂದ ಅಭಿಪ್ರಾಯವನ್ನು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೂ ವರದಿ ಮಾಡಿದ್ದೇವೆ. ಎಂಟು ದಿನಗಳಲ್ಲಿ ರೈಲ್ವೇ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಅದಕ್ಕೆ ಸಂಬಂಧಪಟ್ಟ ಸರ್ವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಸಂಸದರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಇಲ್ಲಿ ಯಾವ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬಹುದು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.


Nk Channel Final 21 09 2023