Bengaluru 22°C
Ad

ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ: ಮಾಜಿ ಸಚಿವ ವಿ. ಸುನಿಲ್ ಕುಮಾರ್

ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಮುಂದಿನ ವಾರ ಗೃಹ ಸಚಿವರನ್ನು ಭೇಟಿ ಮಾಡುತ್ತೇವೆ. ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನ ಪೊಲೀಸರಿಂದ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವರಿಂದ ಸ್ಪಷ್ಟನೆ ಕೇಳುತ್ತೇವೆ ಎಂದರು.

ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ. ಒಬ್ಬ ಶಾಸಕನನ್ನು ಬೆದರಿಸುವ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಮಟ್ಟ ಹಾಕುವ ಹುನ್ನಾರ ಇದಾಗಿದೆ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023
Ad