ಉಡುಪಿ: ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆಯಾಗಿದೆ. ಗೋವಾದಿಂದ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 300 ಬಾಕ್ಸ್ ಮದ್ಯ ವಶಕ್ಕೆ ಪಡೆಯಲಾಗಿದೆ.

ಮಹೀಂದ್ರ ಪಿಕಪ್ ಹಾಗೂ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದರು. ಮಹೀಂದ್ರ ಪಿಕಪ್ ವಾಹನ ಮತ್ತು ಸ್ವಿಫ್ಟ್ ಡಿಸೈರ್ ಕಾರು ವಶಕ್ಕೆ ಪಡೆಯಲಾಗಿದೆ.

ಬ್ಲೂ ಓಷಿಯನ್ ವಿಸ್ಕಿ ಎಂಬ ಬ್ರ್ಯಾಂಡ್‌ನ ಮದ್ಯ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ನಾಲ್ವರು ಆರೋಪಿಗಳು ವಶಕ್ಕೆ ಪಡೆಯಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.