Bengaluru 21°C
Ad

ಇನ್ನೋವಾ ಕಾರಿಗೆ ಇನ್ಸುಲೇಟ‌ರ್ ವಾಹನ ಡಿಕ್ಕಿ: ಏಳು ಮಂದಿ ಗಂಭೀರ

ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟ‌ರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ.

ಉಡುಪಿ: ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟ‌ರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ.

Ad

ಕೇರಳ ಮೂಲದ ಇನ್ನೋವಾ ಕಾರ್‌ನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದು, ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರು.

Ad

ಈ ಸಂದರ್ಭದಲ್ಲಿ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಇನ್ಸುಲೇಟರ್ ವಾಹನ ಇನ್ನೋವಾ ಕಾರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟ‌ರ್ ವಾಹನ ಪಲ್ಟಿಯಾಗಿ ಬಿದ್ದಿದೆ.

Ad

ಗಾಯಗೊಂಡ ಏಳು ಮಂದಿ ಹಾಗೂ ಇನ್ಸುಲೇಟರ್ ವಾಹನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad
Ad
Ad
Nk Channel Final 21 09 2023