ಉಡುಪಿ: ಜಗನ್ನಾಥ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಜಗನ್ನಾಥ ದಾಸರ ಕೃತಿಗಳ ಮೆರವಣಿಗೆ ರಥಬೀದಿಯಲ್ಲಿ ನಡೆಯಿತು.
ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಶ್ರೀ ಮಠದ ಪಾರುಪತ್ಯೆದಾರ ಶ್ರೀಶ ಭಟ್ ಕಡೆಕಾರು ಹಾಗೂ ಮಠದ ಸಿಬ್ಬಂದಿ ಉಪಸ್ಥಿತರಿದ್ದರು.
ಜಗನ್ನಾಥ ದಾಸರ ಸಾಹಿತ್ಯ ಮತ್ತು ಭಕ್ತಿ ಪರಂಪರೆಯನ್ನು ಸ್ಮರಿಸುವ ಈ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿದ್ದರು.

