Bengaluru 21°C
Ad

ಉಡುಪಿ: ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ 3182 ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ವತಿಯಿಂದ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಸಹಯೋಗದೊಂದಿಗೆ ಆಯೋಜಿಸಿದ್ದ "ನನ್ನ ನಾಡು ನನ್ನ ಹಾಡು" ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ನಡೆಯಿತು.

ಉಡುಪಿ: ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ 3182 ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ವತಿಯಿಂದ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಸಹಯೋಗದೊಂದಿಗೆ ಆಯೋಜಿಸಿದ್ದ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ನಡೆಯಿತು.

Ad

ಸಮಾರಂಭ ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಸಿಎ ದೇವಾನಂದ ಅವರು, ರೋಟರಿ ಹಾಗೂ ಲಯನ್ಸ್ ಜೊತೆಗೂಡಿ ಪ್ರತಿಭೆಗಳನ್ನು ಅನ್ವೇಷಿಸುವ ಕೆಲಸ ಮಾಡಿದೆ. ಇಂತಹ ಸಂಗೀತ ಕಾರ್ಯಕ್ರಮಗಳ ಮೂಲಕ‌ ಪ್ರತಿಭೆಗಳ ಪರಿಚಯವಾಗುತ್ತದೆ. ಉತ್ತಮ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ, ಅವರನ್ನು ಬೆಳೆಸುವ ಕೆಲಸ ಆಗಬೇಕು ಎಂದರು. ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮುಖ್ಯಸ್ಥೆ ತೇಜಸ್ವಿನಿ ಅನಿಲ್ ರಾಜ್ ಅಧ್ಯಕ್ಷತೆ ವಹಿಸಿದ್ದರು.

Ad

ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರೋಟರಿಯ ಬಿ.ಎಂ. ಭಟ್, ಲಯನ್ಸ್ ಪ್ರಥಮ ಉಪ ಜಿಲ್ಲಾ ಗವರ್ನರ್ ಸ್ವಪ್ನ ಸುರೇಶ್, ದ್ವಿತೀಯ ಉಪ ಜಿಲ್ಲಾ ಗವರ್ನರ್ ರಾಜೀವ ಕೋಟ್ಯಾನ್, ರೋಟರಿಯ ಜಿಲ್ಲಾ ಕಾರ್ಯದರ್ಶಿ ಐರೋಡಿ ರಾಮದೇವ ಕಾರಂತ್, ಲಯನ್ಸ್ ಜಿಲ್ಲಾ ಚೀಫ್ ಕೋರ್ಡಿನೇಟರ್ ಹರಿಪ್ರಸಾದ್ ರೈ, ಸಂಗೀತ ಕಲಾವಿದರ ಸಂಘದ ಅಧ್ಯಕ್ಷೆ ಮುಕ್ತ ಶ್ರೀನಿವಾಸ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

Ad
Ad
Ad
Nk Channel Final 21 09 2023