Bengaluru 16°C

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಪ್ರಕಟ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.


ತೆಂಕುತಿಟ್ಟು ಯಕ್ಷಗಾನ ಕಲಾವಿದರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.


ಉಡುಪಿ ಪತ್ರಿಕಾ ಭವನದಲ್ಲಿ 2024ನೇ ಸಾಲಿನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಹೆಸರು ಪ್ರಕಟಿಸಿದ ಅವರು, ಪಾರ್ತಿಸುಬ್ಬ ಪ್ರಶಸ್ತಿ 1ಲಕ್ಷ ರೂ. ನಗದು ಪ್ರಶಸ್ತಿ ಒಳಗೊಂಡಿದೆ ಎಂದರು.


ಅಕಾಡಮಿಯ ಗೌರವ ಪ್ರಶಸ್ತಿಗೆ 5 ಜನ ಸಾಧಕರಾದ ಕೊಳ್ತಿಗೆ ನಾರಾಯಣ ಗೌಡ, ಕೋಡಿ ವಿಶ್ವನಾಥ ಗಾಣಿಗ, ರಾಘವದಾಸ್, ಸುಬ್ರಾಯ ಹೊಳ್ಳ, ಕಾಂತರಾಜು, ಇವರನ್ನು ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ. 50,000ಗಳ ನಗದು, ಪ್ರಶಸ್ತಿ ಫಲಕ ನೀಡಿ ಪುರಸ್ಕರಿಸಲಾಗುವುದು ಎಂದರು.


ಅಕಾಡೆಮಿಯ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ 10 ಜನ ಸಾಧಕರಾದ ಅಡ್ಕ ಗೋಪಾಲಕೃಷ್ಣ ಭಟ್, ಜಗನ್ನಾಥ ಆಚಾರ್ಯ ಎಳ್ಳಂಪಳ್ಳಿ, ಮವ್ವಾರು ಬಾಲಕೃಷ್ಣ ಮಣಿಯಾಣಿ, ಉಮೇಶ್ ಕುಪ್ಪೆಪದವು, ಶಿವಾನಂದ ಗೀಜಗಾರು, ಮುಗ್ವಾ ಗಣೇಶ್ ನಾಯ್ಕ, ಸುರೇಂದ್ರ ಮಲ್ಲಿ, ಅಂಡಾಲ ದೇವಿಪ್ರಸಾದ ಶೆಟ್ಟಿ, ಕೃಷ್ಣಪ್ಪ ಮತ್ತು ಹಳುವಳ್ಳಿ ಜ್ಯೋತಿ ಇವರನ್ನು ಆಯ್ಕೆ ಮಾಡಲಾಗಿದೆ. ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ.25,000 ನಗದು ಪ್ರಶಸ್ತಿ ಫಲಕ ನೀಡಲಾಗುವುದು ಎಂದು ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿದರು.


Nk Channel Final 21 09 2023