ಉಡುಪಿ: ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕಾ ದೇವಿಯ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಿಎಂ ಆಶೀರ್ವಾದ ಪಡೆದರು.
Z-ಪ್ಲಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದರು. ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಯಿತು. ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಕೇರಳ ಸಿಎಂ ಆದ ಬಳಿಕ ಮೊದಲು ಭೇಟಿ ನೀಡಿದರು. ಸತೀಶನ್ ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದರು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಿಎಂ ಗೆ ಗೌರವ ಸಲ್ಲಿಸಲಾಯಿತು.

