ಉಡುಪಿ: ಕೊಡವೂರು- ಮಲ್ಪೆ ರಸ್ತೆಯು ಹೊಂಡಗುಂಡಿಗಳಿಂದ ಕೂಡಿದ್ದು, ಸ್ಥಳೀಯರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ರಸ್ತೆಯ ಡಾಂಬರು ಕಿತ್ತುಹೋಗಿದ್ದು, ಜಲ್ಲಿಕಲ್ಲುಗಳು ಮೇಲೆ ಎದ್ದಿವೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನಿತ್ಯ ಸಂಚರಿಸುವ ಜನರು ಸಂಕಷ್ಟ ಎದುರಿಸುವಂತಾಗಿದೆ.
ಈಗಾಗಲೇ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ನಗರಸಭೆಯ ಟೆಂಡರ್ ಪ್ರಕ್ರಿಯೆ ಆಗಿದ್ದು, ಕಾಮಗಾರಿ ಮಾತ್ರ ಇನ್ನೂ ಶುರುವಾಗಿಲ್ಲ. ಹೀಗಾಗಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.