Ad

ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಕಾರ್ಯಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ.

ಉಡುಪಿ: ಮಳೆಗಾಲದಲ್ಲಿ ಅವ್ಯವಸ್ಥೆಗಳ ಆಗರವಾಗಿರುವ ಸಂತಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಇಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವೀಕ್ಷಣೆ ಮಾಡಿದರು.
ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ ಕಳೆದ ಕೆಲವು ಸಮಯಗಳಿಂದ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ವಿಳಂಬದಿಂದ ದಿನ ನಿತ್ಯ ಇಲ್ಲಿ ಗೋಳು ತಪ್ಪಿದ್ದಲ್ಲ. ಇಂದು ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದ ಕೋಟ, ಸಮಸ್ಯೆಯ ಕುರಿತು ಗುತ್ತಿಗೆದಾರರ ಜೊತೆ ಸಮಾಲೋಚನೆ ನಡೆಸಿದರು.

Ad
300x250 2

ದಿನನಿತ್ಯ ಇಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಗಮನ ಸೆಳೆದ ಶಾಸಕ ಯಶ್ಪಾಲ್ ಸುವರ್ಣ ಶೀಘ್ರ ಇದಕ್ಕೆ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಕೂಡ ಆಗಮಿಸಿದರು.

ಮಳೆಗಾಲದಲ್ಲಿ ಅವಘಡಗಳು ಸಂಭವಿಸುವ ಮೊದಲೇ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆಗಳನ್ನು ನೀಡಿದರು.

Ad
Ad
Nk Channel Final 21 09 2023
Ad