ಉಡುಪಿ: ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಭೂ ಸರ್ವೇ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ವಿಧಾನ ಮಂಡಲದಲ್ಲಿ ಭೂ ಸರ್ವೇ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ತಾವೂ ಈ ಹಿಂದೆ ಭೂ ಸರ್ವೇ ನಡೆಸುವಂತೆ ಮನವಿ ಮಾಡಿದ್ದೆ. ಒಂದು ವರ್ಷದ ಕಾಲಾವಕಾಶದಲ್ಲಿ ಸಮಿತಿ ರಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವ ಪ್ರಕ್ರಿಯೆ ನಡೆಯಲಿದೆ.
ಕೇರಳದಲ್ಲಿ ಅನುಸರಿಸಿರುವ ಉಮ್ಮರ್ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಮಿತಿ ರಚಿಸುವುದು ಸೂಕ್ತ ಎಂದು ಅವರು ಹೇಳಿದರು.

