ಉಡುಪಿ: ಆತ್ರಾಡಿ ಸಮೀಪದ ಕಬ್ಯಾಡಿ ಪರಿಸರದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ತಡರಾತ್ರಿ ನಡೆದಿದೆ. ಕಬ್ಯಾಡಿಯ ಬಾಲಕೃಷ್ಣ ನಾಯಕ್ ಎಂಬವರ ಕಾಂಪೌಂಡ್ ನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ.
ಅದೇ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ 80ಬಡಗಬೆಟ್ಟು ಗ್ರಾಪಂ ಸದಸ್ಯ ಶುಭಕರ್ ಶೆಟ್ಟಿ ಅವರಿಗೆ ಚಿರತೆ ಕಾಣಿಸಿಕೊಂಡಿದ್ದು, ಅವರು ತಮ್ಮ ಮೊಬೈಲ್ ನಲ್ಲಿ ಚಿರತೆ ಕಾಂಪೌಂಡ್ ನಲ್ಲಿ ಸಂಚರಿಸುತ್ತಿರುವ ದೃಶ್ಯವನ್ನು ಸೆರೆಹಿಡಿದಿದ್ದಾರೆ.

