Bengaluru 24°C
Ad

ಕಾಂಗ್ರೆಸ್ಸಿಗರು ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬದಲು ಜನರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲಿ: ಯಶ್ಪಾಲ್ ಸುವರ್ಣ ತಿರುಗೇಟು

ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ.

ಉಡುಪಿ : ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಕೇವಲ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಗ್ಗೆ ಪ್ರತಿಭಟನೆ ನಡೆಸುವುದು ಕೇವಲ ಪ್ರಚಾರದ ಉದ್ದೇಶಕ್ಕಾಗಿ ಮಾತ್ರ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿಯ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೀಕ್ಷಿಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇವತ್ತು ಕಾಂಗ್ರೆಸ್ಸಿಗರು ಇಂದ್ರಾಳಿ ರೈಲ್ವೆ ಬ್ರಿಡ್ಜ್ ವಿಳಂಬ ಕುರಿತು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಇದು ಕೇವಲ ಪ್ರಚಾರಕ್ಕಾಗಿ ಮಾತ್ರ.ಅವರಿಗೆ ಅಷ್ಟೊಂದು ಜನಪರ ಕಾಳಜಿ ಇದ್ದರೆ ಜನರ ಸಮಸ್ಯೆಗಳ ಬಗ್ಗೆ ಪ್ರತಿಭಟನೆ ನಡೆಸಲಿ. ರೇಷನ್ ಕಾರ್ಡ್ ರದ್ದತಿ ,ಹಕ್ಕು ಪತ್ರ ವಿತರಣೆ ಮತ್ತು ಅಂಗನವಾಡಿ ನೌಕರರಿಗೆ ಸಂಬಳ ನೀಡುವ ವಿಚಾರದಲ್ಲಿ ಪ್ರತಿಭಟನೆ ನಡೆಸಿದರೆ ಆಗ ಕಾಂಗ್ರೆಸ್ಸಿಗರದ್ದು ನಿಜವಾದ ಜನಪರ ಕಾಳಜಿ ಎಂದು ಒಪ್ಪಿಕೊಳ್ಳಬಹುದು ಎಂದು ಲೇವಡಿ ಮಾಡಿದ್ದಾರೆ.

Ad
Ad
Nk Channel Final 21 09 2023