ಉಡುಪಿ: ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಿಂದ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫಿಸರ್ ಗಿರೀಶ್ ರಾವ್ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ ನಡೆಸಲಾಗಿದೆ. ಕಾರ್ಕಳ ನಗರ ಪುಲ್ಕೇರಿಯಲ್ಲಿರುವ ಮನೆ ಮತ್ತ ವಾಣಿಜ್ಯ ಸಂಕೀರ್ಣದ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಮಂಜಿನಾಥ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.