ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಯೋಜಿಸಿರುವ ವಿವಿಧ ಸ್ಪರ್ಧೆಗಳಿಗೆ ಶನಿವಾರ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಜನ್ಮಾಷ್ಟಮಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಸ್ಪರ್ಧೆಗಳ ಸರಣಿಯಲ್ಲಿ ಮೊದಲ ದಿನ ವಿವಿಧ ವಿಭಾಗಗಳಲ್ಲಿ ದಾಸರ ಪದಗಳ ಗಾಯನ ಸ್ಪರ್ಧೆ ನಡೆಯಿತು. ವಿವಿಧ ವಯೋಮಾನದ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿ ಭಕ್ತಿಪ್ರಧಾನ ಗೀತೆಗಳನ್ನು ಪ್ರಸ್ತುತಪಡಿಸಿದರು.

ಜನ್ಮಾಷ್ಟಮಿ ಪ್ರಯುಕ್ತ ಮುಂದಿನ ದಿನಗಳಲ್ಲಿಯೂ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸ್ಪರ್ಧೆಗಳು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಮಠದ ವತಿಯಿಂದ ಆಹ್ವಾನಿಸಲಾಗಿದೆ.