ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕರ್ ಮೇಲೆ ನೀರು ಹಾಯಿಸುವ ಮೂಲಕ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

View this post on Instagram

A post shared by News Karnataka (@newskarnataka)