Bengaluru 31°C

ಉಡುಪಿ: ಮಹಾರಾಷ್ಟ್ರ ಎಫೆಕ್ಸ್ ಬ್ಯಾಂಕ್ ಉದ್ಯೋಗಿ ನೇಣಿಗೆ ಶರಣು

ಉಡುಪಿ ನಗರದ ಆದರ್ಶ್ ಆಸ್ಪತ್ರೆಯ ಬಳಿ ಇರುವ, ವಸತಿ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಗೋಪಾಲ ಕೃಷ್ಣ ಪ್ರಭು ಎನ್ನುವರು ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ.

ಉಡುಪಿ: ಉಡುಪಿ ನಗರದ ಆದರ್ಶ್ ಆಸ್ಪತ್ರೆಯ ಬಳಿ ಇರುವ, ವಸತಿ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಗೋಪಾಲ ಕೃಷ್ಣ ಪ್ರಭು ಎನ್ನುವರು ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ.


ಮೃತ ವ್ಯಕ್ತಿ ಮಹಾರಾಷ್ಟ್ರ ಎಫೆಕ್ಸ್ ಬ್ಯಾಂಕ್ ಉದ್ಯೋಗಿಯಾಗಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.


ಬೆಳಿಗ್ಗೆ ಬಾಗಿಲು ತೆರೆಯದೆರುವುದನ್ನು ಗಮನಿಸಿದಾಗ ನೇಣು ಬಗೆದುಕೊಂಡಿರುವುದು ಗೊತ್ತಾಗಿದೆ . ತಕ್ಷಣವೇ ಉಡುಪಿ ನಗರ ಪೊಲೀಸರಿಗೆ ಮಾಹಿತಿ ನೀಡಿ , ಶವವನ್ನು ಕೆಳಕ್ಕೆ ಇಳಿಸಲಾಗಿದೆ . ಉಡುಪಿ ನಗರ ಪೊಲೀಸರು ಶವದ ಮಹಜರು ಕಾರ್ಯ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ನೆರವಾದರು.


Nk Channel Final 21 09 2023