Bengaluru 28°C

ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನಾ ಜಾಥಾ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಯಿತು.

ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಯಿತು.


ಉಡುಪಿ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬಳಿಕ ಅಲ್ಲಿಂದ ಆರಂಭಗೊಂಡ ಜಾಥವು ಸರ್ವಿಸ್‌, ಸಿಟಿ ಬಸ್‌ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಸಾಗಿಬಂದು ಶ್ರೀ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಸಮಾಪ್ತಿಗೊಂಡಿತು.


ಜಾಥಾದಲ್ಲಿ ಸಾವಿರಾರು ಹಿಂದೂ‌ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಭಾಷಣ ಮಾಡಿದರು. ಬಿಜೆಪಿ ಸಹಿತವಾಗಿ ವಿವಿಧ ಹಿಂದು ಸಂಘಟನೆಗಳು, ಉಡುಪಿ ಇಸ್ಕಾನ್‌ನ ಪ್ರಮುಖರು, ಭಕ್ತರು ಭಾಗವಹಿಸಿದ್ದರು‌.


Nk Channel Final 21 09 2023