ಉಡುಪಿ : ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಚಿವರಿಗೆ ಗೌರವ ಸಲ್ಲಿಸಲಾಯಿತು.

ಬಳಿಕ ರಾಜ್ಯದ ಹಲವು ರಾಜಕೀಯ ವಿಚಾರಗಳ ಕುರಿತು ಮಾತನಾಡಿದ ಸಚಿವರು, ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳ ಸೂಕ್ಷ್ಮ ವಿಚಾರವಾಗಿದ್ದು, ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ತಿಳಿಸಿದರು.

ದೆಹಲಿಯ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಆದ್ಯತೆ ಸಿಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ವೇಳೆ ತಳ್ಳಾಟ, ನೂಕಾಟ ಸಹಜ ಎಂದರು. ರಾಜ್ಯದ ಸ್ಟಿಂಗ್ ವಿಚಾರದ ಚರ್ಚೆ, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆಂಬ ವಿಜಯೇಂದ್ರ ಹೇಳಿಕೆ ಹಾಗೂ ಎಸ್‌ಐಆರ್ ಪ್ರಕ್ರಿಯೆಯ ದುರುಪಯೋಗದ ಆರೋಪಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು.

ಕರ್ನಾಟಕದವರಿಗೆ ರಾಜ್ಯಪಾಲ ಹುದ್ದೆ ನೀಡದಿರುವುದು ನೋವಿನ ವಿಚಾರ ಎಂದು ಹೇಳಿದ ಸಚಿವರು, ರಾಜ್ಯದಲ್ಲಿ ಬಿಜೆಪಿಯ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ವ್ಯಂಗ್ಯವಾಡಿದರು.

View this post on Instagram

A post shared by News Karnataka (@newskarnataka)