ಉಡುಪಿ: ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾನುವಾರ ಸಂತೆಯ ದಿನ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆ, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದಲ್ಲಿ ಇಂಟರ್ ಲಾಕ್ ಅಳವಡಿಕೆ ಮಾಡಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದು,
ಒಣ ಮೀನು ಮಾರಾಟಗಾರರಿಗೆ ಸೂಕ್ತ ಶೆಡ್ ನಿರ್ಮಾಣ, ಅಪಾಯಕಾರಿ ಮರಗಳ ತೆರವು, ಮಾರುಕಟ್ಟೆ ಪರಿಸರದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಶೀಘ್ರದಲ್ಲಿ ಪ್ರಾರಂಭಗೊಳ್ಳಲಿರುವ ಸಂತೆ ಮಾರುಕಟ್ಟೆಯಿಂದ ರಾಷ್ಟೀಯ ಹೆದ್ದಾರಿ ಸಂಪರ್ಕ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಬಗ್ಗೆ ಸ್ಥಳೀಯರ ಅಭಿಪ್ರಾಯ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ಉಪಾಧ್ಯಕ್ಷರಾದ ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ನವೀನ್ ಕಾಂಚನ್, ಕವಿತಾ, ಪಕ್ಷದ ಪ್ರಮುಖರಾದ ಉಮೇಶ್ ಶೆಟ್ಟಿ, ಪ್ರಶಾಂತ್ ಕಾಂಚನ್ ಬೆಂಗ್ರೆ, ಪ್ರಸಾದ್ ರಾವ್ ಮೊದಲಾದವರು ಉಪಸ್ಥಿತರಿದ್ದರು.