Bengaluru 30°C

ಮಲ್ಪೆ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಯಶ್ ಪಾಲ್ ಅಧಿಕಾರಿಗಳೊಂದಿಗೆ ಭೇಟಿ

ಮಲ್ಪೆ ಶಾಂತಿ ನಗರ, ಅಂಬಲಪಾಡಿ ಕಿದಿಯೂರು ಪಡುಕರೆ ಮತ್ತು ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆಯ ಕಡಲ್ಕೊರೆತ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಡುಪಿ: ಮಲ್ಪೆ ಶಾಂತಿ ನಗರ, ಅಂಬಲಪಾಡಿ ಕಿದಿಯೂರು ಪಡುಕರೆ ಮತ್ತು ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆಯ ಕಡಲ್ಕೊರೆತ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಲ್ಕೊರೆತ ಸಮಸ್ಯೆಯ ಗಂಭೀರತೆಯ ಬಗ್ಗೆ ಈಗಾಗಲೇ ಮೀನುಗಾರಿಕೆ ಸಚಿವರಾದ ಶ್ರೀ ಮಾಂಕಾಳ ವೈದ್ಯರ ಗಮನಕ್ಕೆ ತಂದಿದ್ದು, ಕಡಲ್ಕೊರೆತ ತಡೆಗೆ ತಕ್ಷಣ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ.


ಇಲಾಖೆಯ ಅಧಿಕಾರಿಗಳ ಮೂಲಕ ತುರ್ತು ಕಾಮಗಾರಿಯ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಸಾಲ್ಯಾನ್, ಪ್ರವೀಣ್, ಸ್ಥಳೀಯ ಪ್ರಮುಖರು ಹಾಗೂ ಬಂದರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Nk Channel Final 21 09 2023