Bengaluru 22°C
Ad

ಅಜ್ಜರಕಾಡು ಭುಜಂಗ ಪಾರ್ಕಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ ನಗರಸಭೆಯ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕ್ ಅವ್ಯವಸ್ಥೆ ಹಾಗೂ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಡುಪಿ: ಉಡುಪಿ ನಗರಸಭೆಯ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕ್ ಅವ್ಯವಸ್ಥೆ ಹಾಗೂ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹೃದಯ ಭಾಗದಲ್ಲಿರುವ ಏಕೈಕ ಪಾರ್ಕನ್ನು ಸಾರ್ವಜನಿಕರ ಉಪಯೋಗಕ್ಕೆ ಅನುಕೂಲವಾಗುವಂತೆ ಉತ್ತಮ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮರ್ಪಕ ದಾರಿ ದೀಪ, ಪಾರ್ಕಿನ ಸ್ವಚ್ಛತೆ, ಪ್ರವಾಸೋದ್ಯಮ ಇಲಾಖೆ ಅನುದಾನದಿಂದ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಬಂಧಿಸಿದ ಅನುಷ್ಠಾನ ಸಂಸ್ಥೆಗೆ ನಿರ್ದೇಶನ ನೀಡಿದರು.

ವಾಕಿಂಗ್ ಹಾಗೂ ವಾಯುವಿಹಾರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ಘಟಕ ಅಳವಡಿಕೆ ಹಾಗೂ ಪಾರ್ಕಿನ ರಂಗಮಂದಿರ ಹಾಗೂ ಮಕ್ಕಳ ಕ್ರೀಡಾ ಸಲಕರಣೆಗಳನ್ನು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಅಜ್ಜರಕಾಡು ವಾರ್ಡ್ ನಗರಸಭಾ ಸದಸ್ಯರಾದ ಶ್ರೀಮತಿ ರಶ್ಮಿ ಸಿ. ಭಟ್, ನಗರಸಭೆಯ ಎ. ಇ. ಇ. ದುರ್ಗಾ ಪ್ರಸಾದ್, ಇಂಜಿನಿಯರ್ ಕಾರ್ತಿಕ್ ಹಾಗೂ ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad