ಉಡುಪಿ: ನೂತನ ಮಂತ್ರಿಮಂಡಲದಲ್ಲಿ ಎಂಎಲ್ ಸಿ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆಗ್ರಹಪಡಿಸಿದೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ ಅವರು, ಮಂಜುನಾಥ್ ಭಂಡಾರಿ ಅವರು 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಕೊಡುಗೆ ಅಪಾರ.
ರಾಜ್ಯದ ಎಲ್ಲ ಮಂತ್ರಿಗಳ ಜೊತೆ ನಿಕಟ ಸಂಪರ್ಕದಲ್ಲಿರುವ ಅವರು ಎಲ್ಲರ ಸಮಸ್ಯೆಗೆ ಸ್ಪಂದಿಸುತ್ತಾರೆ. ಹೀಗಾಗಿ ಅವರ ಸೇವೆಯನ್ನು ಗುರುತಿಸಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕೆಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮಹಮ್ಮದ್ ಸಲಾಂ, ನಟರಾಜ್ ಹೊಳ್ಳ, ಅಭಿಜಿತ್ ಪೂಜಾರಿ, ಮುನಾಫ್ ಕೋಡಿ, ರಕ್ಷಿತ್ ಶೆಟ್ಟಿ ಇದ್ದರು.

