ಉಡುಪಿ: ಮಣಿಪಾಲದ ಲೇಕ್ವ್ಯೂ ಕಟ್ಟಡದಲ್ಲಿರುವ ಜನರಲ್ ಸ್ಟೋರ್ವೊಂದರಲ್ಲಿ ಮೊಬೈಲ್ ಫೋನ್ ಕಳವು ಮಾಡಿರುವ ಘಟನೆ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮೊಬೈಲ್ ಕಳವು ಮಾಡಿದ್ದು, ಕಳ್ಳನ ಕೈಚಳಕ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳತನದ ಬಳಿಕ ವ್ಯಕ್ತಿ ಅಲ್ಲಿಂದ ತೆರಳಿರುವುದು ದೃಶ್ಯಾವಳಿಯಲ್ಲಿ ದಾಖಲಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಲಾಗಿದೆ. ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ತಿಳಿದಿದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

