ಉಡುಪಿ: ಮಹಿಳೆಯೊಬ್ಬರು ತನ್ನ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಮಲ್ಲಾರು ಫಕೀರಣಕಟ್ಟೆ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ಮಲ್ಲಾರು ಫಕೀರಣಕಟ್ಟೆ ನಿವಾಸಿ ನಸೀದಾ (27) ಎಂದು ಗುರುತಿಸಲಾಗಿದೆ.
ನಸೀದಾ ಅವರು ಗಂಡನೊಂದಿಗೆ ವಿಚ್ಛೇದನ ಪಡೆದುಕೊಂಡು, ಕಳೆದ ಒಂದು ವರ್ಷದಿಂದ ಮಗಳೊಂದಿಗೆ ತಾಯಿ ಮನೆಯಲ್ಲಿ ವಾಸವಾಗಿದ್ದರು. ಆ.4ರಂದು ಬೆಳಿಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಚಿನ್ನ, ಹಣ ಮತ್ತು ಮೊಬೈಲ್ ತೆಗೆದುಕೊಂಡು ತನ್ನ ಎರಡು ವರ್ಷದ ಮಗುವಿನೊಂದಿಗೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತಾಯಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
Ad