Bengaluru 21°C
Ad

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಇನ್ನಿಲ್ಲ

ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಉಡುಪಿ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

Ad

ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು, ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಕುದಿ ವಸಂತ ಶೆಟ್ಟಿ ಅವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ.

Ad

ಉತ್ತಮ ವಾಗ್ಮಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ವಸಂತ ಶೆಟ್ಟಿ ಅವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರಿಯರು, ಸಹೋದರ ಸಹೋದರಿಯರನ್ನು ಆಗಲಿದ್ದಾರೆ.

Ad
Ad
Ad
Nk Channel Final 21 09 2023