ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ‌ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಈ ವೇಳೆ ಪರ್ಯಾಯ ಶಿರೂರು ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಬಳಿಕ ಶ್ರೀಕೃಷ್ಣ ಮಠದಲ್ಲಿ ದೇವರ ನೈವೇದ್ಯ ತಯಾರಿಕೆಗೆ ಹೊಸದಾಗಿ ನಿರ್ಮಿಸಲಾದ ಅಡುಗೆ ಕೋಣೆ (ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಿರೂರು ಮಠದ ದಿವಾನ ಉದಯಕುಮಾ‌ರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೇಕಾರು, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.