ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠ ಭೇಟಿ ಹಿನ್ನೆಲೆ ಭದ್ರತಾ ವ್ಯವಸ್ಥೆಗೆ 3000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

10 ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್ಪೆಕ್ಟರ್ಗಳ ನಿಯೋಜನೆ ಮಾಡಲಾಗಿದ್ದು, 127 ಎಸ್ ಐ, 232 ಎ ಎಸ್ ಐ, 1608 ಪಿಸಿ, 39 ಡಬ್ಲ್ಯೂ ಪಿ ಸಿ ಗಳ ನಿಯೋಜನೆ ಮಾಡಲಾಗಿದೆ.

48 ಬಿಡಿಡಿಎಸ್ ಟೀಂ, ಆರು ಕೆಎಸ್‌ ಆರ್‌ ಪಿ, ಆರು ಕ್ಯೂಆರ್‌ಟಿ ಟೀಮ್ ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಮೈಸೂರು, ಬೆಂಗಳೂರು ಶಿವಮೊಗ್ಗ ಪೊಲೀಸರ ನಿಯೋಜನೆ ಮಾಡಲಾಗಿದ್ದು,  ರೋಡ್ ಶೋ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಸಲಿದ್ದಾರೆ. ನಗರದ ಎಲ್ಲಾ ಕಡೆ ಬಾಂಬ್ ಸ್ಕ್ವಾಡ್ ಗಳಿಂದ ತಪಾಸಣೆ ನಡೆಯಲಿದೆ.