ಉಡುಪಿ: ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ. ಈ ಸಂಬಂಧ ನಡೆದ ಜಗಳದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು ದೂರು ದಾಖಲಾಗಿದೆ.
ಕಾಂಗ್ರೆಸ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ದೊಂಡೇರಂಗಡಿ ಬಿಜೆಪಿ ಕಾರ್ಯಕರ್ತರಾದ ಉದಯ್ ನಾಯ್ಕ್, ನಿತ್ಯಾನಂದ ಕುಲಾಲ್, ರೂಪೇಶ್ ಕುಮಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ.
ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಸಹಚರರು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದ್ದು, ಕೈ ಕಾರ್ಯಕರ್ತ ದೀಕ್ಷಿತ್ ಶೆಟ್ಟಿ ಮತ್ತು ಅಂಕಿತ್ ಹೆಗ್ಡೆ ವಿರುದ್ಧ ದೂರು ದಾಖಲಾಗಿದೆ. ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಜಾತಿನಿಂದನೆ, ಹಲ್ಲೆ, ಹಾಗೂ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಗಾಯಾಳುಗಳು ಸದ್ಯ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Ad